ಸಾವಿನ ಕಾರಣ ಇನ್ನೂ ನಿಗೂಢ..
ಹೈದರಾಬಾದ್ (ವಿಶ್ವ ಕನ್ನಡಿಗ ನ್ಯೂಸ್) : ಖ್ಯಾತ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಅವರು ಬಂಜಾರಾ ಹಿಲ್ಸ್ ನಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ಪ್ರತ್ಯೂಷಾ ದೇಶದ 30 ಪ್ರಮುಖ ಫ್ಯಾಷನ್ ಡಿಸೈನರ್ ಗಳಲ್ಲಿ ಒಬ್ಬರು. ಅವರು ಬಂಜಾರಾ ಹಿಲ್ಸ್ ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಅವರು ಚಲನಚಿತ್ರ ವ್ಯಕ್ತಿಗಳಿಗೆ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ ಅವರು ಸ್ನಾನಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತ್ಯೂಷಾ ಪ್ರಸಿದ್ಧ ನಾಯಕ ನಾಯಕಿಯರಿಗೆ ವೈಯಕ್ತಿಕ ಫ್ಯಾಷನ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು.
ಪ್ರತ್ಯೂಷಾ ಆತ್ಮಹತ್ಯೆಯ ಹಿಂದಿನ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರ ಫೋನ್ ಕರೆ ಡೇಟಾವನ್ನು ಪರಿಶೀಲಿಸುತ್ತಿದ್ದಾರೆ, ಅಲ್ಲದೇ ಅಲ್ಲಿರುವ ಸಿಬ್ಬಂದಿಯನ್ನು ಸಹ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಂತ ಪ್ರತಿಭಾವಂತಳಾಗಿರುವುದರಿಂದ ಅವರು ಈ ರೀತಿಯಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಪ್ರಶ್ನಾರ್ಹವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.