ಬೆಂಗಳೂರು (www.vknews.in) : ಪ್ರವಾದಿ(ಸ.ಅ) ಕುರಿತ ಅವಹೇಳನಕಾರಿ ಹೇಳಿಕೆಗೆ ದೇಶದಾದ್ಯಂತ ಮುಸ್ಲಿಂ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿರುವುದರಿಂದ ಮುಂಜಾಗ್ರತೆಯಾಗಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಇನ್ನು ಇದೇ ವಿಚಾರವಾಗಿ ಬೆಂಗಳೂರು ಕಮಿಷನರ್ ಪ್ರತಾಪ್ ರೆಡ್ಡಿ ಅವರು ಮುಸ್ಲಿಂ ಮುಖಂಡರ ಜೊತೆ ಶನಿವಾರ ಸಭೆ ನಡೆಸಿದರು.
ಶ್ರೀರಾಮಪುರ ಹಾಗೂ ಇತರೆ ಠಾಣೆಗಳಲ್ಲೂ ಸಭೆ ಜರುಗಿದವು. ‘ಅನುಮತಿ ಇಲ್ಲದೇ ನಗರದಲ್ಲಿ ಯಾವುದೇ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಶಾಂತಿಯಿಂದ ವರ್ತಿಸುವಂತೆ ಮುಖಂಡರು ತಮ್ಮ ಸಮುದಾಯದ ಜನರಿಗೆ ತಿಳಿವಳಿಕೆ ಹೇಳಬೇಕು’ ಎಂದು ಪ್ರತಾಪ್ ರೆಡ್ಡಿ ಸಭೆಯಲ್ಲಿ ಕೋರಿದರು.
ಶ್ರೀರಾಮಪುರ ಠಾಣೆ ಸಭೆಯಲ್ಲಿ ಮಾತನಾಡಿದ ಮುಸ್ಲಿಂ ಮುಖಂಡ ಸೈಯದ್ ತಬ್ರೇಜ್, ‘ರಾಜಕೀಯ ಷಡ್ಯಂತ್ರದಿಂದ ಕೂಡಿದ ಪ್ರತಿಭಟನೆಗೆ ನಮ್ಮ ಬೆಂಬಲವಿಲ್ಲ’ ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.