ಬೆಳ್ಳಾರೆ (www.vknews.in) : ಪ್ರವಾದಿ ಮುಹಮ್ಮದ್(ಸ. ಅ)ರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿ. ಜೆ. ಪಿ ರಾಷ್ಟ್ರೀಯ ವಕ್ತಾರೆ ನುಪುರ್ ಶರ್ಮ ಮತ್ತು ನವೀನ್ ಕುಮಾರ್ ಜಿಂದಾಲ್ ರ ಶೀಘ್ರ ಬಂಧನಕ್ಕೆ ಮತ್ತು ದೇಶದ ಘನತೆಯನ್ನು ಕಳೆದ ಬಿಜೆಪಿ ಸರಕಾರ ರಾಜಿನಾಮೆ ನೀಡಲು ಒತ್ತಾಯಿಸಿ ಎಸ್ ಡಿ ಪಿ ಐ ಬೆಳ್ಳಾರೆ ಬ್ಲಾಕ್ ಸಮಿತಿ ವತಿಯಿಂದ ಬೆಳ್ಳಾರೆಯಲ್ಲಿ ಪ್ರತಿಭಟನೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ವಿಧಾನಸಭಾ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ ವಿಶ್ವ ಪ್ರವಾದಿ ಮುಹಮ್ಮದ್ ಪೈಗಂಬರ್ ರವರನ್ನು ಹೀನಾಯವಾಗಿ ನಿಂದಿಸಿ, ಧರ್ಮಗಳ ನಡುವೆ ದ್ವೇಷವನ್ನು ಹರಡಿ ಭಾರತ ದೇಶ ಪ್ರಪಂಚದಲ್ಲಿ ತಲೆತಗ್ಗಿಸುವಂತೆ ಮಾಡಲು ಕಾರಣಕರ್ತರಾದ ಬಿಜೆಪಿ ಯ ವಕ್ತಾರೆ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ರವರನ್ನು ಪಕ್ಷದಿಂದ ಅಮಾನತು ಮಾಡುವ ನಾಟಕ ಮಾಡದೇ ಕಠಿಣ ಕಾನೂನಿನ ಮೂಲಕ ಬಂಧಿಸಿ ಜೈಲಿಗೆ ಅಟ್ಟಬೇಕು ಎಂದು ಹೇಳಿದರು.
ಪ್ರತಿಭಟನಾ ಸಭೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ಎಸ್ ಡಿ ಪಿಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷ ಹಮೀದ್ ಮರಕ್ಕಡ ಸ್ವಾಗತಿಸಿ ಶಫೀಕ್ ಬೆಳ್ಳಾರೆ ವಂದಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.