ಮಂಗಳೂರು (www.vknews.in) : ತಲಪಾಡಿ ಪಿಲಿಕೂರ್ ಎಂಬಲ್ಲಿ ಇರುವ ಶಾರದಾ ವಿಧ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ 9 ನೇ ತರಗತಿ ವಿದ್ಯಾರ್ಥಿ ಬೆಂಗಳೂರು ಹೊಸಕೋಟೆ ಮೂಲದ ಪೂರ್ವಜ್ ಎಂಬಾತ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮನೆಗೆ ಫೋನ್ ಮಾಡಲು ಅವಕಾಶ ಕೊಡಲಿಲ್ಲ ಎಂದು ಆತ್ಮಹತ್ಯೆ ಮಾಡಿದ್ದ ಎಂಬುದಾಗಿ ತಿಳಿದು ಬಂದಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಬಾಲಕನನ್ನು ಬೆಂಗಳೂರು ಹೊಸಕೋಟೆ ಮೂಲದ ಪೂರ್ವಜ್ (14) ಎಂದು ಗುರುತಿಸಲಾಗಿದ್ದು, ಈತ ಕಿನ್ಯಾ ಶಾರದಾ ವಿಧ್ಯಾನಿಕೇತನದಲ್ಲಿ 9ನೇ ತರಗತಿ ಕಲಿಯುತ್ತಿದ್ದ ಎಂದು ತಿಳಿದು ಬಂದಿದೆ. ಜೂನ್ 11 ರಂದು ಆತನ ತಾಯಿ ಹುಟ್ಟುಹಬ್ಬದ ಹಿನ್ನಲೆ ತಾಯಿಗೆ ಕರೆ ಮಾಡಿ ಶುಭಾಷಯ ತಿಳಿಸಲು ಹಾಸ್ಟೆಲ್ ವಾರ್ಡನ್ ಗೆ ಮೊಬೈಲ್ ಕೇಳಿದ್ದಾನೆ. ಆದರೆ ವಾರ್ಡನ್ ಮೊಬೈಲ್ ನೀಡಲು ನಿರಾಕರಿಸಿದ್ದಾನೆ. ಅಲ್ಲದೆ ಮನೆಯವರು ಕರೆ ಮಾಡಿದ ಸಂದರ್ಭದಲ್ಲೂ ಕೂಡ ಬಾಲಕನಿಗೆ ಕರೆ ನೀಡಿಲ್ಲ ಎಂದು ಆರೋಪಿಸಲಾಗಿದೆ.
ಇದರಿಂದ ಮನನೊಂದ ಬಾಲಕ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮನೆಯವರು ಆರೋಪಿಸಿದ್ದಾರೆ. ಬಾಲಕ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಅಮ್ಮನಿಗೆ ಹುಟ್ಟುಹಬ್ಬದ ಶುಭಾಷಯಗಳು. ಎಲ್ಲರೂ ಖುಷಿಯಾಗಿರಿ, ಶಾಲೆಗೆ ತನಗಾಗಿ ಕಟ್ಟಿರುವ ಶುಲ್ಕವನ್ನು ವಾಪಸ್ಸು ಪಡೆದುಕೊಳ್ಳಿ. ನಿಮ್ಮಿಂದ ನಾನು ದೂರವಾಗುತ್ತಿದ್ದೇನೆ. ಯಾರೂ ಕೂಗಬೇಡಿ, ಎಂದು ಆಂಗ್ಲಭಾಷೆಯಲ್ಲಿ ಡೆತ್ ನೋಟಲ್ಲಿ ಬರೆದಿಡಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.