ಮಂಗಳೂರು (www.vknews.in) : “ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21” ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಪೂರ್ವಭಾವಿ ಯೋಗ ತರಬೇತಿ ಶಿಬಿರ ದಿನಾಂಕ 16-06-2022 ರಂದು ಜಿಲ್ಲಾ ಗೃಹರಕ್ಷಕದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ನಡೆಯಿತು. ಖ್ಯಾತ ಯೋಗ ಗುರು ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಮತ್ತು ಯೋಗ ಶಿಕ್ಷಕಿ ಸುಮಾ ಇವರ ಮಾರ್ಗದರ್ಶನದಲ್ಲಿ ಈ ತರಬೇತಿ ಶಿಬಿರ ನಡೆಯಿತು.
ಯೋಗ ಮನುಷ್ಯನ ಆರೋಗ್ಯಕ್ಕೆ ಅತೀ ಅವಶ್ಯಕ. ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು ಪ್ರತಿಯೊಬ್ಬರು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಗೋಪಾಲಕೃಷ್ಣ ದೇಲಂಪಾಡಿ ಅವರು ಕರೆ ನೀಡಿದರು. ದಿನದ 8 ಗಂಟೆಗಳ ಕಾಲ ನಿಂತುಕೊಂಡು ಒತ್ತಡದ ಕೆಲಸ ಮಾಡುವ ಗೃಹರಕ್ಷಕರಿಗೆ ಯೋಗ ಅತ್ಯಂತ ಅನಿವಾರ್ಯ ಎಂದು ಅವರು ನುಡಿದರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ನೇತೃತ್ವದಲ್ಲಿ ಈ ಶಿಬಿರ ನಡೆಯಿತು ಸುಮಾರು 25 ಮಂದಿ ಗೃಹರಕ್ಷಕರು ಈ ಶಿಬಿರದಲ್ಲಿ ಭಾಗವಹಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.