8 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ
ಹೈದಾರಾಬಾದ್ (ವಿಶ್ವ ಕನ್ನಡಿಗ ನ್ಯೂಸ್) : ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಕಾವು ತೆಲಂಗಾಣಕ್ಕೂ ಹಬ್ಬಿದ್ದು, ಪ್ರತಿಭಟನೆ ವೇಳೆ ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ನಡೆಸಿದ ಫೈರಿಂಗ್ ನಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಅಗ್ನಿಪಥ್ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಕಾರರನ್ನು ನಿಗ್ರಹಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾನಿರತ ವ್ಯಕ್ತಿ ಸಾವನ್ನಪ್ಪಿದ್ದು, ಪ್ರತಿಭಟನೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಪೋಲೀಸರ ಹೇಳಿಕೆಯ ಪ್ರಕಾರ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಒರ್ವ ವ್ಯಕ್ತಿ ಮೃತನಾಗಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಮೃತನಾದ ವ್ಯಕ್ತಿಯನ್ನು ದಾಮೋದರ್ ಕುರಶಿಯಾ ಎನ್ನಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.