ದಕ್ಷಿಣ ಕನ್ನಡ ಮೊದಲ ಸ್ಥಾನ, ಚಿತ್ರದುರ್ಗ ಕೊನೆಯ ಸ್ಥಾನ..
ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಿದ್ದು, 61.88% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಒಟ್ಟು 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಅವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದವರಲ್ಲಿ ಶೇ.68.72 ಬಾಲಕಿಯರು ಮತ್ತು ಶೇ.55.22 ಬಾಲಕರು ಇದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.88.02 ವಿದ್ಯಾರ್ಥಿಗಳು ಪಾಸಾಗುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಉಡುಪಿ (ಶೇ. 86.38) ಇದ್ದಾರೆ, ಶೇ.49.31 ವಿದ್ಯಾರ್ಥಿಗಳು ಪಾಸಾಗುವ ಮೂಲಕ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.
ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆ ಕೂಡ್ಲಿಗು ತಾಲ್ಲೂಕು ಕೊಟ್ಟೂರು ಇಂದು ಇಂಡಿಪೆಂಡೆಂಟ್ ಪಿಯು ಕಾಲೇಜು ವಿದ್ಯಾರ್ಥಿನಿಯರಾದ ಶ್ವೇತಾ ಭೀಮಶಂಕರ್ ಬೈರಗೊಂಡ ಮತ್ತು ಮಡಿವಾಳರ ಸಹನಾ 600ಕ್ಕೆ 594 ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ದಾಸನಪುರದಲ್ಲಿರುವ ಬಿಜಿಎಸ್ ಪಿಯು ಕಾಲೇಜಿನ ನೀಲು ಸಿಂಗ್, ಜಾಲಹಳ್ಳಿಯಲ್ಲಿರುವ ಸೇಂಟ್ ಕ್ಲಾರೆಟ್ ಕಾಂಪೊಸಿಟ್ ಪಿಯು ಕಾಲೇಜು ವಿದ್ಯಾರ್ಥಿ ಆಕಾಶ್ ದಾಸ್, ಚಿಕ್ಕಬಳ್ಳಾಪುರ ಅಗಲಗುರ್ಕಿ ಎಸ್ಬಿಜಿಎನ್ಎಸ್ ರೂರಲ್ ಕಾಂಪೊಸಿಟ್ ಪಿಯು ಕಾಲೇಜು ವಿದ್ಯಾರ್ಥಿನಿ ನೇಹಾ ಬಿ.ಆರ್. ಮತ್ತು ಜಯನಗರ ಪಿಯು ಕಾಲೇಜಿನ ವಿದ್ಯಾರ್ಥಿ ಮಾನವ್ ವಿಜಯ್ ಕೇಜರಿವಾಲ್ 600ಕ್ಕೆ 596 ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಬೆಂಗಳೂರು ಜಯನಗರ ಆರ್.ವಿ. ಪಿಯು ಕಾಲೇಜಿನ ವಿದ್ಯಾರ್ಥಿನಿ ಸಿಮ್ರಾನ್ ಶೀಷಾ ರಾವ್ 600ಕ್ಕೆ 598 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.