ಮೈಸೂರು (www.vknews.in) : ಮೈಸೂರು ಹೆದ್ದಾರಿಯ ರಂಗಯ್ಯನ ಕೊಪ್ಪಲು ಗೇಟ್ ಬಳಿ ಹಾಲಿನ ಟ್ಯಾಂಕರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವತಿಯರು ಸಾವನ್ನಪ್ಪಿರುವ ಘಟನೆ ನಡೆದಿದೆ.
25 ವರ್ಷದ ಜೀವಿತ ಹಾಗೂ 26 ವರ್ಷದ ಪ್ರತ್ಯೂಷ ಮೃತಪಟ್ಟವರಾಗಿದ್ದು, ಇವರುಗಳು ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಹಾಲಿನ ಟ್ಯಾಂಕರ್ ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಜೀವಿತಾ ಮೃತಪಟ್ಟರೆ, ಪ್ರತ್ಯೂಷ ಮೈಸೂರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.