ನಾಪೋಕ್ಲು (www.vknews.in) : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷಕ್ಕೆ ನಾಪೋಕ್ಲು ವಿನ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಕಾರ್ಯಕರ್ತರು ಸೇರ್ಪಡೆಗೊಂಡರು. ನಾಪೋಕ್ಲುವಿನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಎಸ್ ಡಿ ಪಿ ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಫಿ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭ ಮಾತನಾಡಿದ ಶಫಿ ನಮ್ಮ ಪಕ್ಷದ ತತ್ವ ಸಿದ್ಧಾಂತವನ್ನು ಅರಿತು ಯುವಕರು ಹಾಗೂ ಹಿರಿಯರು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ನಮ್ಮ ಪಕ್ಷವನ್ನು ಬೆಂಬಲಿಸಲಿದ್ದು ಇದರಿಂದ ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದರು. ಬಳಿಕ ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಪಕ್ಷದ ಶಾಲು ಹೊದಿಸಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭ ಎಸ್ ಡಿ ಪಿ ಐ ನಾಲ್ಕುನಾಡು ಬ್ಲಾಕ್ ಅಧ್ಯಕ್ಷರಾದ ಅಬೂಬಕ್ಕರ್, ಗ್ರಾಮ ಪಂಚಾಯಿತಿ ಸದಸ್ಯ ಕೆ. ವೈ. ಅಶ್ರಫ್, ಹಾಗೂ ಪಕ್ಷದ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ವರದಿ :ಝಕರಿಯ ನಾಪೋಕ್ಲು
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.