ಕೆಮ್ಮಾರ(ವಿಶ್ವಕನ್ನಡಿಗ ನ್ಯೂಸ್): ಸ.ಉ.ಹಿ.ಪ್ರಾ.ಶಾಲೆ ಕೆಮ್ಮಾರದಲ್ಲಿ ಜೂನ್. 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೆಯ S.D.M.C ಅಧ್ಯಕ್ಷರಾಗಿರುವ ಶ್ರೀ ಅಝೀಝ್.ಬಿ.ಕೆ, ಉಪಾಧ್ಯಕ್ಷರಾಗಿರುವ ಶ್ರೀಮತಿ ಸುಮಯ್ಯ, ಸದಸ್ಯರಾದ ಶ್ರೀ ಪದ್ಮನಾಭ ಶೆಟ್ಟಿ, ಗ್ರಾಮಪಂಚಾಯತ್ ಸದಸ್ಯೆಯಾಗಿರುವ ವಾರಿಜಾಕ್ಷಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿ ಯೋಗಾಭ್ಯಾಸ ಮಾಡಿದರು.
ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ.ಎಮ್ ಎಲ್ಲರನ್ನು ಸ್ವಾಗತಿಸಿ ಯೋಗದ ಮಹತ್ವದ ಬಗ್ಗೆ ತಿಳಿಸಿದರು. ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗಾಭ್ಯಾಸ ಮಾಡಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.