ಬಂಟ್ವಾಳ (ವಿಶ್ವ ಕನ್ನಡಿಗ ನ್ಯೂಸ್) : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ, ಮಂಗಳೂರು ಫಾಲ್ಕನ್ ಪದವಿಪೂರ್ವ ಕಾಲೇಜು ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮಾಹಾ ಸಾರಾ ಅವರು 576 ಅಂಕಗಳನ್ನು ಗಳಿಸಿ 96 ಶೇಕಡಾ ಫಲಿತಾಂಶ ದಾಖಲಿಸಿ ಅತ್ಯುತ್ತಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಈಕೆ ಬಂಟ್ವಾಳ ತಾಲೂಕು ಪಾಣೆಮಂಗಳೂರು ಸಮೀಪದ ಬೋಳಂಗಡಿ ನಿವಾಸಿ ಮುಖ್ತಾರ್ ಅಹ್ಮದ್ ಹಾಗೂ ಹಾಜಿರಾ ದಂಪತಿಯ ಪುತ್ರಿ. ಈಕೆ ಮುಂದೆ ಎಂಬಿಬಿಎಸ್ ವ್ಯಾಸಂಗ ಮಾಡಿ ವೈದ್ಯೆಯಾಗುವ ಕನಸು ಕಂಡಿದ್ದು, ಹೆತ್ತವರು ಹಾಗೂ ಕುಟುಂಬಿಕರು ಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿನಿ ಮಾಹಾ ಸಾರಾ ಅವರ ವೈದ್ಯೆಯಾಗುವ ಕನಸಿಗೆ ಜಮಾಅತೆ ಇಸ್ಲಾಮೀ ಹಿಂದ್ ಪಾಣೆಮಂಗಳೂರು ಘಟಕ ಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಸಹಕಾರ ನೀಡುವುದಾಗಿ ಘಟಕ ತಿಳಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.