ದುಬೈ (ವಿಶ್ವ ಕನ್ನಡಿಗ ನ್ಯೂಸ್) : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 28 ರಂದು ಯುಎಇಗೆ ಭೇಟಿ ನೀಡಲಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ. ಈ ಸಂದರ್ಭದಲ್ಲಿ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ಅವರು ತಮ್ಮ ವೈಯಕ್ತಿಕ ಸಂತಾಪವನ್ನು ವ್ಯಕ್ತಪಡಿಸುತ್ತಾರೆ. ಅದೇ ರಾತ್ರಿ ಅವರು ಹಿಂದಿರುಗಲಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಯುಎಇಯ ಹೊಸ ಅಧ್ಯಕ್ಷರಾಗಿ ಮತ್ತು ಅಬುಧಾಬಿಯ ಆಡಳಿತಗಾರರಾಗಿ ಆಯ್ಕೆಯಾದ ಹಿಸ್ ಹೈನೆಸ್ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಅಭಿನಂದಿಸಲು ಕೂಡ ಈ ಸಂದರ್ಭವನ್ನು ಮೋದಿ ಅವರು ಬಳಸಿಕೊಳ್ಳುವರು.
ಯುಎಇ ಮತ್ತು ಭಾರತದ ನಡುವೆ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕೆ (ಸಿಇಪಿಎ) ಸಹಿ ಹಾಕಿದ ನಂತರ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿದೆ. ಅವರ ಭೇಟಿಯು ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳಿಗೆ ಬಲವಾದ ವೇಗವನ್ನು ನೀಡುತ್ತದೆ, ದ್ವಿಪಕ್ಷೀಯ ಸಚಿವರ ಸಭೆಗಳು ಮತ್ತು ಮುಕ್ತ ವ್ಯಾಪಾರ ಒಪ್ಪಂದದ ಪ್ರಯೋಜನಗಳ ಕುರಿತು ಕಾರ್ಯಕ್ರಮಗಳು ನಡೆಯುತ್ತವೆ ಎಂದು ಹೇಳಲಾಗಿದೆ.
ಇದು 2015, 2018, ಮತ್ತು 2019 ರ ನಂತರ ಯುಎಇಗೆ ಪಿಎಂ ಮೋದಿಯವರ ನಾಲ್ಕನೇ ಭೇಟಿಯಾಗಿದೆ. ಮತ್ತೊಂದೆಡೆ, ಶೇಖ್ ಮೊಹಮದ್ ಅವರು 2016 ಮತ್ತು 2017ರಲ್ಲಿ ಭಾರತಕ್ಕೆ ಪ್ರಯಾಣಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.