ಕಾರ್ಕಳ (www.vknews.in) : ಜೂ 24 ಕಾರ್ಕಳದ ಎಂಪಿಎಂ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ಕಾರ್ಯಕ್ರಮ ನಡೆಯಿತು. ಕಾರ್ಕಳ ನಗರ ಪೊಲೀಸ್ ಠಾಣೆ, ಕಾಲೇಜಿನ ಐಕ್ಯೂಎಸಿ, ರೆಡ್ ಕ್ರಾಸ್ ಘಟಕ , ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕ್ರೀಡಾ ವಿಭಾಗದ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಿವೈಎಸ್ಪಿ ವಿಜಯ್ ಪ್ರಸಾದ್ ಮಾತನಾಡಿ ಮಾದಕ ದ್ರವ್ಯ ಸೇವನೆಯಿಂದ ಯುವಪೀಳಿಗೆ ದೂರವಿರುವುದು ಬಹುಮುಖ್ಯ ಅದಕ್ಕಾಗಿ ನಿಮ್ಮಂತ ಯುವ ಕಾಲೇಜಿನ ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಇದರ ದುಷ್ಪರಿಣಾಮಗಳ ಕುರಿತು ಎಚ್ಚೆತ್ತುಕೊಳ್ಳುವಂತೆ ಕರೆ ನೀಡಿದರು.
S.P. ಸಂಪತ್ ಮಾದಕದ್ರವ್ಯಗಳ ಗುಂಗಿನ ವ್ಯಸನದಿಂದ ವಿದ್ಯಾರ್ಥಿಗಳು ಯಾವ ರೀತಿ ಹೊರಬರಬೇಕೆಂದು ಮುಂದೆ ಇಂತಹ ಯಾವುದೇ ದುಶ್ಚಟಗಳಿಗೆ ವಿದ್ಯಾರ್ಥಿಗಳು ಒಳಗಾಗಬಾರದೆಂದು ತಿಳಿಸಿದರು.
ಅಧ್ಯಕ್ಷೀಯ ನುಡಿಗಳನ್ನಾಡಿದ ಪ್ರಾಂಶುಪಾಲರಾದ ಶ್ರೀ ವರ್ಮಾ ಅಜ್ರಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಇಂತಹ ಯಾವುದೇ ದುಶ್ಚಟಕ್ಕೆ ಬಲಿಯಾಗಲಿಲ್ಲ ಎಂದು ಸಂತಸ ಪಟ್ಟರು ಮತ್ತು ಇದರ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕೆಂದು ಕಾಳಜಿ ವಹಿಸಿದರು.
ಕಾರ್ಯಕ್ರಮದಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆ PSI ಪ್ರಸನ್ನ M.S ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕ್ರೀಡಾ ವಿಭಾಗ ಮತ್ತು ಸ್ನಾತಕೋತ್ತರ ವಿಭಾಗದ ಉಪನ್ಯಾಸಕರಾದ ಮಂಜುನಾಥ ಸ್ವಾಗತಿಸಿದರು. ವಿದ್ಯಾರ್ಥಿ ಅಜಿತ್ ನಿರೂಪಿಸಿದರು. ರೆಡ್ ಕ್ರಾಸ್ ವಿಭಾಗದ ಉಪನ್ಯಾಸಕಿ ಮೈತ್ರಿ ವಂದಿಸಿದರು .
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.