ಮುಂಬೈ (ವಿಶ್ವ ಕನ್ನಡಿಗ ನ್ಯೂಸ್) : ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಬೈನ ಮನೆಯಿಂದ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 2002ರ ಗುಜರಾತ್ ದಂಗೆಗಳ ಬಗ್ಗೆ ಪೊಲೀಸರಿಗೆ ತೀಸ್ತಾ ಆಧಾರರಹಿತ ಮಾಹಿತಿ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಇದರ ನಂತರ, ಅವರನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.
ಪೊಲೀಸ್ ತಂಡವು ಶನಿವಾರ ಮಧ್ಯಾಹ್ನ 3 ಗಂಟೆಗೆ ಆಗಮಿಸಿತು. ತೀಸ್ತಾಳನ್ನು ವಶಕ್ಕೆ ತೆಗೆದುಕೊಂಡು ಮುಂಬೈನ ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.