ವಾರಣಾಸಿ (ವಿಶ್ವ ಕನ್ನಡಿಗ ನ್ಯೂಸ್) : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ಹಕ್ಕಿಗೆ ಡಿಕ್ಕಿ ಹೊಡೆದ ನಂತರ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಾರಣಾಸಿಗೆ ಎರಡು ದಿನಗಳ ಭೇಟಿ ನೀಡಿರುವ ಯೋಗಿ, ನಂತರ ಲಕ್ನೋಗೆ ವಿಮಾನದಲ್ಲಿ ತೆರಳಿದರು.
ವಾರಾಣಸಿಯಿಂದ ಲಖನೌಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಟೇಕಾಫ್ ಆದ ಕೂಡಲೇ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ನಂತರ ಪೈಲಟ್ ತುರ್ತು ಭೂಸ್ಪರ್ಶ ಮಾಡುವಂತೆ ಕೇಳಿದರು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.