ಪುತ್ತೂರು (www.vknews.in) : ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ – ಶಿಕ್ಷಕ ಸಭೆ ಮತ್ತು 2021-22 ನೇ ಸಾಲಿನ ಎಸೆಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಖ್ಯಾತ ಮೋಟಿವೇಟರ್ ರಫೀಕ್ ಮಾಸ್ಟರ್ ಆತೂರು ಅವರು ಮಾತನಾಡಿ, ಮಕ್ಕಳ ಯಶಸ್ವಿ ಯಲ್ಲಿ ಶಿಕ್ಷಕರೊಂದಿಗೆ ಪೋಷಕರ ಪಾತ್ರವೂ ಮಹತ್ತರವಾಗಿದ್ದು, ಮಕ್ಕಳನ್ನು ನಿರಂತರ ಬೆದರಿಸಿ ಅವರಲ್ಲಿ ಭಯ ತುಂಬುವ ಬದಲು ಮುದ್ದಿನಿಂದ ಕಿವಿ ಮಾತು ಹೇಳಿ, ಅವರ ಕಲಿಕೆ ಹಾಗೂ ಪ್ರತಿಭೆಗೆ ಪ್ರೋತ್ಸಾಹ ನೀಡಿದರೆ ಖಂಡಿತಾ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಧಕನಾಗುತ್ತಾನೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕ ಮುಹಮ್ಮದ್ ಸಾಬ್ ಹಾಜಿ ಅವರು ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಯು.ಮುಹಮ್ಮದ್ ಹಾಜಿ ಪಡೀಲ್ ಕಾರ್ಯಕ್ರಮವನ್ನು ಉದ್ಗಾಟಿಸಿದರು. ಟ್ರಸ್ಟಿಗಳಾದ ಯು.ಅಬ್ದುಲ್ಲಾ ಹಾಜಿ , ಅಬ್ದುಲ್ ರಹಿಮಾನ್ ಅಝಾದ್ ದರ್ಬೆ , ಅಸ್ವಾಲಿಹಾ ಶರೀಅತ್ ಕಾಲೇಜ್ ನ ಉಸ್ತಾದ್ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ, ಸಾಲ್ಮರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಮೋಹನಾಂಗಿ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಎಸೆಸೆಲ್ಸಿ ಯಲ್ಲಿ ಡಿಸ್ಟಿಂಕ್ಷನ್ ಪಡೆದ ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಮತ್ತು ಸಾಲ್ಮರ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಶಿಕ್ಷಕರಾದ ಅಬ್ದುಲ್ ರವೂಫ್ ಪ್ರಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ರೈ ಅಭಿನಂದನಾ ಪತ್ರ ವಾಚಿಸಿದರು. ಸಿಫಾನ ಸ್ವಾಗತಿಸಿದರು, ಹಸೀನಾ ಕಾರ್ಯಕ್ರಮ ನಿರ್ವಹಿಸಿದರು. ದಿವ್ಯ ಕೊನೆಗೆ ವಂದಿಸಿದರು. ದೈಹಿಕ ಶಿಕ್ಷಕರಾದ ಅಶ್ರಫ್ ಮತ್ತು ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಸಹಕರಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.