ಇಬ್ಬರು ಆರೋಪಿಗಳ ಬಂಧನ..
ರಾಜಸ್ಥಾನ (ವಿಶ್ವ ಕನ್ನಡಿಗ ನ್ಯೂಸ್) : ಉದಯಪುರದಲ್ಲಿ ಇಬ್ಬರು ಪುರುಷರು ದರ್ಜಿಯೊಬ್ಬರನ್ನು ಕೊಂದ ನಂತರ ರಾಜಸ್ಥಾನದಾದ್ಯಂತ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದಲ್ಲದೆ, ಒಂದು ತಿಂಗಳ ಕಾಲ ರಾಜ್ಯದಲ್ಲಿ ಜನರು ದೊಡ್ಡ ಮಟ್ಟದಲ್ಲಿ ಸೇರಿವುದನ್ನು ಸಹ ನಿಷೇಧಿಸಲಾಗಿದೆ.
ಹಾಡಹಗಲೇ ಟೈಲರ್ ಒಬ್ಬರನ್ನು ಕಡಿದು ಕೊಲೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ಕನ್ಹಯ್ಯಾಲಾಲ್ ತೇಲಿ (40) ಎಂದು ಗುರುತಿಸಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಈ ದಾಳಿ ನಡೆಸಿದ್ದಾರೆ. ಇಬ್ಬರೂ ಆರೋಪಿಗಳನ್ನು ರಾಜ್ಸಮಂದ್ ನಿಂದ ಬಂಧಿಸಲಾಗಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಬಂಧಿತರನ್ನು ಗೌಸ್ ಮೊಹಮ್ಮದ್ ಮತ್ತು ಮೊಹಮ್ಮದ್ ರಿಯಾಜ್ ಅನ್ಸಾರಿ ಎಂದು ಗುರುತಿಸಲಾಗಿದೆ.
ಪ್ರವಾದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಕನ್ಹಯ್ಯಾ ಲಾಲ್ ತೇಲಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಪೊಲೀಸರ ಪ್ರಕಾರ, ಇದು ಆರೋಪಿಗಳನ್ನು ಪ್ರಚೋದಿಸಿತು. ಮಂಗಳವಾರ ಮಧ್ಯಾಹ್ನ 2.30 ರ ಸುಮಾರಿಗೆ ಈ ಘಟನೆ ನಡೆದಿದೆ.
ಘಟನೆಯ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಘಟನೆಯನ್ನು ವಿರೋಧಿಸಿ ಹತಿಪೋಲೆ, ಘಂಟಾಘರ್, ಅಶ್ವನಿ ಬಜಾರ್, ದೆಹ್ಲಿ ಗೇಟ್ ಮತ್ತು ಮಾಲ್ದಾಸ್ ಸ್ಟ್ರೀಟ್ ಮಾರುಕಟ್ಟೆಗಳನ್ನು ಮುಚ್ಚಲಾಗಿದೆ. ರಾಜಸ್ಥಾನದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.