ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಜಿಲ್ಲೆಯಾದ್ಯಂತ ಭಾರೀ ಮಳೆಯ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜುಲೈ 1(ನಾಳೆ) ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸುರಿದ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿತ್ತು. ವಿದ್ಯಾರ್ಥಿಗಳು, ಪೋಷಕರು, ಶಾಲಾ ವಾಹನ ಚಾಲಕರು ಮಳೆಯಿಂದಾಗಿ ಪರದಾಡುವಂತಾಗಿತ್ತು. ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಬೆಳಗ್ಗೆ 8:30ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲಾರ್ಟ್ ಘೋಷಿಸಿದೆ. ಇದರ ನಡುವೆ ನಾಳೆಯೂ ಧಾರಾಕಾರ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.