ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಇಂದು (ಜುಲೈ 1 ) ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ .ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗೃತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 1 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶದಲ್ಲಿ ತಿಳಿಸಿದ್ದಾರೆ .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.