ಕುಂದಾಪುರ,(ವಿಶ್ವ ಕನ್ನಡಿಗ ನ್ಯೂಸ್ ): ಕುಂದಾಪುರ ದಿಂದ ಬೈಂದೂರಿನತ್ತ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮರವಂತೆ ಬೀಚ್ ನ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ಶನಿವಾರ ತಡರಾತ್ರಿ ನಡೆದಿದೆ. ಕಾರು ಪಲ್ಟಿಯಾಗಿ ಸಮುದ್ರಪಾಲಾದ ಪರಿಣಾಮ ಚಾಲಕ ಸಾವನ್ನಪ್ಪಿದ್ದು, ಇನ್ನೋರ್ವ ನಾಪತ್ತೆಯಾಗಿದ್ದೂ ,ಇಬ್ಬರು ಗಾಯಾಳುಗಳಾಗಿ ಆಸ್ಪತ್ರೆ ಪಾಲಾಗಿದ್ದಾರೆ . ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು .ಬೀಜಾಡಿಯ ಗೋಳಿಬೆಟ್ಟು ನಿವಾಸಿ ವಿರಾಜ್ ಆಚಾರ್ಯ(28) ಸಾವನ್ನಪ್ಪಿದ ದುರ್ದೈವಿ, ರೋಶನ್ ಎಂಬವರು ನಾಪತ್ತೆಯಾಗಿದ್ದು, ಸಮುದ್ರದಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸಂದೇಶ್ ಹಾಗೂ ಕಾರ್ತಿಕ್ ಆಸ್ಪತ್ರೆಗೆ ದಾಖಲಾದವರು ಎಂದು ಗುರುತಿಸಲಾಗಿದೆ.ಮರವಂತೆ ಬೀಚ್ ಬದಿಯ ರಾ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಸುಮಾರು 40 ಅಡಿ ಕೆಳಕ್ಕೆ ಉರುಳಿತ್ತು .ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.