ಮೃತರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು..
ಶಿಮ್ಲಾ (ವಿಶ್ವ ಕನ್ನಡಿಗ ನ್ಯೂಸ್) : ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ. ಶಾಲಾ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೆ ಒಳಗಾಯಿತು. 24 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಅವರಲ್ಲಿ ಅನೇಕರ ಸ್ಥಿತಿ ಚಿಂತಾಜನಕವಾಗಿದೆ. ವರದಿಗಳ ಪ್ರಕಾರ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಬಸ್ಸಿನಲ್ಲಿ 40 ಜನರು ಇದ್ದರು ಎಂದು ತಿಳಿದುಬಂದಿದೆ. ಕುಲ್ಲುವಿನ ನೆವ್ಲಿ ಶಾನ್ಶೇರ್ ರಸ್ತೆಯ ಸೈಂಚು ಕಣಿವೆಯಲ್ಲಿ ಬೆಳಿಗ್ಗೆ 8.30 ಕ್ಕೆ ಈ ಅಪಘಾತ ಸಂಭವಿಸಿದೆ. ಬಸ್ ಸಂಪೂರ್ಣವಾಗಿ ಹಾನಿಗೊಳಗಾದ ಸ್ಥಿತಿಯಲ್ಲಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.