ಬಂಟ್ವಾಳ (ವಿಶ್ವ ಕನ್ನಡಿಗ ನ್ಯೂಸ್) : ಕಾರ್ಮಿಕರು ಉಳಿದುಕೊಂಡ ಶೆಡ್ ಮೇಲೆ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿಗೆ ಸಿಲುಕಿ ಮೂವರು ಮೃತಪಟ್ಟು, ಓರ್ವ ಗಾಯಗೊಂಡಿರುವ ಘಟನೆ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತರನ್ನು ಪಾಲಕ್ಕಾಡ್ ನ ಬಿಜು (45), ಆಲಪ್ಪುಳದ ಸಂತೋಷ್ (46) ಮತ್ತು ಕೊಟ್ಟಾಯಂನ ಬಾಬು (46) ಎಂದು ಗುರುತಿಸಲಾಗಿದೆ. ಹಾಗೂ ಕಣ್ಣೂರು ನಿವಾಸಿ ಜಾನ್ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಲ್ಲಿನ ಹೆನ್ರಿ ಕಾರ್ಲೊ ಎಂಬವರ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಕಾರ್ಮಿಕರು ವಾಸವಿದ್ದ ಶೆಡ್ ಮೇಲೆ ಗುಡ್ಡ ಕುಸಿದಿದೆ. ಗುಡ್ಡ ಕುಸಿತದ ವೇಳೆ ಓರ್ವ ಮನೆಯ ಹೊರಗಿದ್ದು, ನಾಲ್ವರು ಮಣ್ಣಿನಡಿ ಸಿಲುಕಿದ್ದರು.
ಜೆಸಿಬಿಯಲ್ಲಿ ಮಣ್ಣು ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ದ.ಕ. ಎಸ್ಪಿ ಹೃಷಿಕೇಶ್ ಸೋನಾವಣೆ, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ತಹಶೀಲ್ದಾರ್ ಸ್ಮಿತಾರಾಮು, ಪಿಡಿಒ ವಿದ್ಯಾಶಿವಾನಂದ, ಪೋಲಿಸ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್, ಎಸ್ಸೈ ಹರೀಶ್, ಕಂದಾಯ ನಿರೀಕ್ಷಕ ಸಂತೋಷ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.