ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದಂತ ಬಕ್ರಿದ್ ಹಬ್ಬದ ಆಚರಣೆಗಾಗಿ ರಾಜ್ಯ ಸರ್ಕಾರದಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಕೋವಿಡ್ ಸಂಖ್ಯೆಯ ಏರಿಕೆಯ ನಡುವೆಯೂ ಬಕ್ರೀದ್ ಹಬ್ಬವನ್ನು ಕೆಲ ನಿಯಮಗಳನ್ನು ಪಾಲಿಸಿಕೊಂಡು ಆಚರಿಸುವಂತೆ ಸೂಚಿಸಲಾಗಿದೆ.
ಈ ಸಂಬಂಧ ಅಲ್ಪಸಂಖ್ಯಾತ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಮುಸ್ಲಿಂ ಬಾಂಧವರ ಎರಡನೇ ಪ್ರಮುಖ ಹಬ್ಬವಾದ ಬಕ್ರೀದ್ (ಈದ್ – ಉಲ್-ಆಝ್ಹಾ) ಹಬ್ಬವನ್ನು ಜುಲೈ.10, 2022ರ ರವಿವಾರದಂದು ರಾಜ್ಯಾಧ್ಯಂತ ಆಚರಿಸಲಾಗುವುದೆಂದು ರಾಜ್ಯ ಚಂದ್ರದರ್ಶನ ಸಮಿತಿ ಘೋಷಿಸಿರುತ್ತದೆ ಎಂದಿದ್ದಾರೆ.
ರಾಜ್ಯಾದ್ಯಂತ ಪವಿತ್ರ ಬಕ್ರೀದ್ ಹಬ್ಬವನ್ನು ಶಾಂತಿ, ಸುವ್ಯವಸ್ಥೆ ಮತ್ತು ಸಾಮರಸ್ಯದೊಂದಿಗೆ ಆಚರಣೆ ಮಾಡಬೇಕಾಗಿರುವುದರಿಂದ, ಈ ಕೆಳಕಂಡ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ್ದಾರೆ.
ಬಕ್ರೀದ್ ಹಬ್ಬದ ಆಚರಣೆ ಕುರಿತು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹೊರಡಿಸುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ಸೂಚಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.