ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವಿದ್ಯಾರ್ಥಿಗಳ ಹಿತ ದ್ರಷ್ಟಿ ಯಿಂದ ಇಂದು (ಜುಲೈ 8 ) ಹಾಗೂ ನಾಳೆ (ಜುಲೈ 9) ರಂದು ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮನ್ಸೂಚನೆಯಂತೆ ಕಳೆದ ಕೆಲವು ದಿನಗಳಿಂದ ರಜೆ ಜಾಲ್ತಿಯಲ್ಲಿದ್ದೂ , ಮಳೆ ಕಡಿಮೆ ಯಾಗದ ಹಿನ್ನಲೆಯಲ್ಲಿ ಮತ್ತೆ ರಜೆ ಮುಂದುವರಿಸಲಾಗಿದೆ. ಪ್ರಸ್ತುತ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ & ಪೌಢ ಶಾಲೆ ಪದವಿ ಪೂರ್ವ, ಪದವಿ, ಸಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ, ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ನೀಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.