ಲಕ್ನೋ (ವಿಶ್ವ ಕನ್ನಡಿಗ ನ್ಯೂಸ್) : ಒಂದು ಆಟೋದಲ್ಲಿ 27 ಮಂದಿ ಪ್ರಯಾಣಿಸುತ್ತಿದ್ದ ವಿಡಿಯೋ ವೈರಲ್ ಆಗಿದೆ. ತುಂಬಾ ಜನರನ್ನು ನೋಡಿದ ಪೊಲೀಸರು ಆಟೋ ನಿಲ್ಲಿಸಿ ಪ್ರಯಾಣಿಕರನ್ನು ಒಬ್ಬೊಬ್ಬರಾಗಿ ಎಣಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಫತೇಪುರದಲ್ಲಿ ಈ ಘಟನೆ ನಡೆದಿದೆ. ಆರು ಮಂದಿ ಪ್ರಯಾಣಿಸುತ್ತಿದ್ದ ಆಟೋದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 27 ಮಂದಿ ಇದ್ದರು. ದಾರಿಹೋಕರು ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.
https://twitter.com/socialgreek1/status/1546199336186290176
ಫತೇಪುರ್ನ ಬಿಂಡ್ಕಿ ಕೊಟ್ವಾಲಿ ಬಳಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಬ್ಬರು ತಪಾಸಣೆಗಾಗಿ ಆಟೋವನ್ನು ತಡೆದರು. ಪೊಲೀಸರು ವಾಹನವನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಕೊನೆಗೆ ಪೊಲೀಸರು ಪ್ರಯಾಣಿಕರನ್ನು ಕೆಳಗಿಳಿಸುವಂತೆ ಹೇಳಿದಾಗ ಹತ್ತಕ್ಕೂ ಹೆಚ್ಚು ಮಂದಿ ಆಟೋದಿಂದ ಇಳಿದರು. ಆಟೋ ಜಪ್ತಿ ಮಾಡಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.