ಬ್ರಹ್ಮಾವರ (ವಿಶ್ವ ಕನ್ನಡಿಗ ನ್ಯೂಸ್) : ಮನೆ ಸಮೀಪ ಆಟ ಆಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಐದು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಉಪ್ಪೂರು ಸಮೀಪದ ಕೆ ಜಿ ರೋಡ್ ಎಂಬಲ್ಲಿ ನಡೆದಿದೆ. ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5) ಮೃತಪಟ್ಟ ಬಾಲಕನಾಗಿದ್ದಾನೆ.
ನಿನ್ನೆ ಸಂಜೆ ಮಗು ನೀರಿನ ಹೊಂಡಕ್ಕೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ. ಮಗುವನ್ನು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಹೊಂಡದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದ್ದು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.