ತಿರುವನಂತಪುರಂ (ವಿಶ್ವ ಕನ್ನಡಿಗ ನ್ಯೂಸ್) : ಕೇರಳದಲ್ಲಿ ಭಾರತದ ಮೊದಲ ಮಂಕಿಪಾಕ್ಸ್ ದೃಢಪಟ್ಟಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಕೊಲ್ಲಂನ 35 ವರ್ಷದ ವ್ಯಕ್ತಿಯಲ್ಲಿ ಪತ್ತೆಯಾಗಿದ್ದು, ಅವರು ಜುಲೈ 12 ರಂದು ಯುಎಇಯಿಂದ ಕೇರಳಕ್ಕೆ ಆಗಮಿಸಿದರು. ಪುಣೆಯ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಿದ ಮಾದರಿ ಪರೀಕ್ಷೆಯಲ್ಲಿ ಈ ರೋಗ ದೃಢಪಟ್ಟಿದೆ.
ರೋಗಿಯ ತಂದೆ ಮತ್ತು ತಾಯಿ ಪ್ರತ್ಯೇಕವಾಗಿದ್ದಾರೆ. ತಾನು ಯಾರೊಂದಿಗೂ ನಿಕಟ ಸಂಪರ್ಕ ಹೊಂದಿಲ್ಲ ಎಂದು ರೋಗಿ ಹೇಳಿದರೂ, ವಿಮಾನದಲ್ಲಿದ್ದ 11 ಜನರು ನಿಗಾದಲ್ಲಿದ್ದಾರೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ಅವರ ಪೋಷಕರು ಮತ್ತು ಆಟೋ-ಟ್ಯಾಕ್ಸಿ ಚಾಲಕ ಸೇರಿದಂತೆ ಒಟ್ಟು 11 ಜನರು ಸಂಪರ್ಕ ಪಟ್ಟಿಯಲ್ಲಿದ್ದಾರೆ. ರೋಗಿಯು ಪ್ರಸ್ತುತ ತಿರುವನಂತಪುರಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.