ಮಂಗಳೂರು (www.vknews.in) : ಪ್ರಕರಣವೊಂದರ ಆರೋಪಿ ಮುಕ್ತಾರ್ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದ ತಂಡ ಇಂದು ಮುಂಜಾನೆ ಕೊಣಾಜೆಯ ಸಮೀಪ ಫೈರಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರ ಫೈರಿಂಗ್ನಿಂದ ಆರೋಪಿ ಮುಕ್ತಾರ್ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ಮುಕ್ತಾರ್ ಪೊಲೀಸ್ ಸಿಬ್ಬಂದಿಗೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ವೇಳೆ ಫೈರಿಂಗ್ ಮಾಡಲಾಗಿದೆ.
ಪ್ರಕರಣವೊಂದರ ತನಿಖೆಗಾಗಿ ಮುಕ್ತಾರ್ ನನ್ನ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಆರೋಪಿ ಪೊಲೀಸ್ ಸಿಬ್ಬಂದಿಗೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ಎನ್ನಲಾಗಿದೆ. ಈ ಸಂದರ್ಭ ಫೈರಿಂಗ್ ಮಾಡಲಾಗಿದೆ. ಆತನ ವಿರುದ್ಧ ಹದಿನೈದು ಪ್ರಕರಣಗಳಿದ್ದು, ಆರು ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ಆತನನ್ನು ಬಂಧಿಸಲು ಆಗಿರಲಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.