ಕೊಡಗು (ವಿಶ್ವ ಕನ್ನಡಿಗ ನ್ಯೂಸ್) ; ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಹೆಸರಿನ ನಕಲಿ ಖಾತೆ ತೆರೆದು ಕುಲದೇವಿ ಕಾವೇರಿ ಮತ್ತು ಕೊಡವ ಹೆಣ್ಣುಮಕ್ಕಳನ್ನು ಅವಮಾನಿಸಿ ಪೋಸ್ಟ್ ಹಾಕಿದ್ದ ಹಿಂದೂ ಯುವಕನನ್ನು ಬಂಧಿಸಲಾಗಿದೆ.
ಮೊಹಮದ್ ಅಷ್ಫಾಕ್ ಎಂಬ ಹೆಸರಿನಲ್ಲಿ ತಾಯಿ ಕಾವೇರಿ ಮತ್ತು ಕೊಡವ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಪೋಸ್ಟ್ ವೈರಲ್ ಆದ ಬಳಿಕ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ಉಂಟಾಗಿ ನೈಜ ಅಪರಾಧಿಯನ್ನು ಬಂಧಿಸಬೇಕೆಂಬ ಒತ್ತಾಯ ಹೆಚ್ಚಾಗಿತ್ತು.
ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದಿದ್ದು ವಿರಾಜಪೇಟೆ ಸಮೀಪದ ಕೆದಮುಳ್ಳೂರ ಸಮೀಪ ನಿವಾಸಿ ದಿವಿನ್ ದೇವಯ್ಯ ಎಂಬ ಹಿಂದೂ ಯುವಕ ಎಂದು ತನಿಖೆಯಿಂದ ತಿಳಿದು ಬಂದಿದೆ. ಕೊಡಗಿನ ಪೊಲೀಸರು ಅಪರಾಧಿಯನ್ನು ಪತ್ತೆ ಹಚ್ಚುವ ಉದ್ದೇಶದಿಂದ ಫೇಸ್ ಬುಕ್ ಮುಂಬೈ ಕಚೇರಿ ಬಳಿಕ ಕ್ಯಾಲಿಫೋರ್ನಿಯಾದಲ್ಲಿರುವ ಮುಖ್ಯ ಕಚೇರಿ ಸಂಪರ್ಕಿಸಿ ನೈಜ ಅಪರಾಧಿಯನ್ನು ಬಂಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.