ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಜೆಎಸ್ ಎಸ್ ಕಾಲೇಜಿನ ಹಾಸ್ಟೆಲ್ ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಶಿವಾನಿ (21) ಎಂದು ತಿಳಿದು ಬಂದಿದೆ.
ಶಿವಾನಿ ಇಂದು ಪರೀಕ್ಷೆಗೆ ಹಾಜರಾಗದೇ ಇದ್ದಿದ್ದರಿಂದ ಮಧ್ಯಾಹ್ನ ಹಾಸ್ಟೆಲ್ ವಾರ್ಡನ್ ಹೋಗಿ ಪರಿಶೀಲಿಸಿದಾಗ ವಿದ್ಯಾರ್ಥಿನಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.