ಹಮ್ದಾನ್ ಡ್ಯಾನಿಶ್ ಹುಸೇನ್ ಮೃತಪಟ್ಟ ಬಾಲಕ..
ಕೋಯಿಕ್ಕೋಡ್ (ವಿಶ್ವ ಕನ್ನಡಿಗ ನ್ಯೂಸ್) : ಕೇರಳದ ಅಥೋಲಿಯಲ್ಲಿ ಏಳು ವರ್ಷದ ಬಾಲಕ ಮೃತಪಟ್ಟಿರುವುದು ಕೊಲೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕನ ತಾಯಿ ದಿಂಬಿನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಹೇಳಲಾಗಿದೆ. ಬಾಲಕ ಹೃದಯಾಘಾತದಿಂದ ನಿಧನರಾದರು ಎಂದು ಆರಂಭದಲ್ಲಿ ಹೇಳಲಾಗಿತ್ತು. ಅನುಮಾನದ ಮೇಲೆ ಮರಣೋತ್ತರ ಪರೀಕ್ಷೆ ನಡೆಸಿದ ನಂತರವೇ ಇದು ಕೊಲೆ ಎಂದು ಸ್ಪಷ್ಟವಾಯಿತು.
ಡ್ಯಾನಿಶ್ ಹುಸೇನ್ ಅವರ ಪುತ್ರ ಹಮ್ದಾನ್ ಡ್ಯಾನಿಶ್ ಹುಸೇನ್ (7) ಮೃತಪಟ್ಟ ಬಾಲಕ. ಆತನು ಇಲಾಹಿಯಾ ಇಂಗ್ಲಿಷ್ ಶಾಲೆಯ 2ನೇ ತರಗತಿ ವಿದ್ಯಾರ್ಥಿ. ಆತನ ತಾಯಿ ಬುದ್ಧಿಮಾಂದ್ಯತೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸೂಚನೆಗಳಿವೆ. ಅವರನ್ನು ಅಥೋಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹಮ್ದಾನ್ ಭಾನುವಾರ ಮುಂಜಾನೆ 2 ಗಂಟೆ ಸುಮಾರಿಗೆ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಅವನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಲು ಸಾಧ್ಯವಾಗಲಿಲ್ಲ. ಮಗುವಿನ ಸಾವಿನ ಬಗ್ಗೆ ಅನುಮಾನಗೊಂಡ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಯಲ್ಲಿ ಇದು ಕೊಲೆ ಎಂದು ಸ್ಪಷ್ಟವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.