ಇಂಟರ್ನೆಟ್ ಸಂಪರ್ಕ ಸ್ಥಗಿತಕ್ಕೆ ಮನವಿ : ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರು
ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬಳಿಕ ಶಾಂತಿ ನೆಲೆಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಶಾಂತಿ ಸಭೆ ನಡೆಯಿತು.
ಸಭೆಯಲ್ಲಿ ಜನಪ್ರತಿನಿಧಿಗಳ ಪ್ರಚೋಧನಕಾರಿ ಭಾಷಣ, ಮಾಧ್ಯಮಗಳಲ್ಲಿ ಬರುತ್ತಿರುವ ಉದ್ರೇಕಕಾರಿ ಡಿಬೇಟ್ ನಿಲ್ಲಿಸುವಂತೆ ಮನವಿ ಮಾಡಲಾಗಿದೆ. ಅಲ್ಲದೆ ಪ್ರಚೋದನಕಾರಿ ಸಂದೇಶಗಳ ರವಾನೆಯನ್ನು ನಿಲ್ಲಿಸುವ ನಿಟ್ಟಿನಲ್ಲಿ ಮುಂದಿನ ಎರಡು ದಿನಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸುವಂತೆ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮನವಿ ಮಾಡಿದ್ದಾರೆ.
ಶಾಂತಿ ಸಭೆಗೆ ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರಾಗಿದ್ದರು. ಈ ಬಗ್ಗೆ ಮಾತನಾಡಿದ ಮಾಜಿ ಶಾಸಕ ಜೆ.ಆರ್.ಲೋಬೋ, ಪ್ರಮುಖ ಮುಸ್ಲಿಂ ಸಂಘಟನೆಗಳು ಗೈರಾಗಲು ಮುಖ್ಯಮಂತ್ರಿಗಳ ತಾರತಮ್ಯ ಕಾರಣ. ಕೇವಲ ಪ್ರವೀಣ್ ನೆಟ್ಟಾರು ಅವರ ಮನೆಗೆ ಮಾತ್ರ ಭೇಟಿ ನೀಡಿ, ಅಲ್ಲೇ ಸಮೀಪದ ಮಸೂದ್ ಮನೆಗೆ ಭೇಟಿ ನೀಡಲಿಲ್ಲ. ಪ್ರವೀಣ್ ಕುಟುಂಬಕ್ಕೆ ಮಾತ್ರ ಪರಿಹಾರ ನೀಡಿದ್ದಾರೆ. ಇದಕ್ಕಾಗಿ ಪ್ರಮುಖ ಮುಸ್ಲಿಂ ಸಂಘಟನೆ ಭಾಗವಹಿಸಿಲ್ಲ ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.