ಪ್ರಕರಣದ ಬಗ್ಗೆ ಕುಟುಂಬಸ್ಥರಿಗೆ ಕಾನೂನಿನ ನೆರವು ನೀಡಲು ನಿರ್ಣಯ..
ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ದ.ಕ ಜಿಲ್ಲಾಡಳಿತ ಇಂದು ಕರೆದಿದ್ದ ಶಾಂತಿ ಸಭೆಯನ್ನು ಮುಸ್ಲಿಂ ಸಂಘಟನೆಗಳು ಬಹಿಷ್ಕರಿಸಿದ್ದು, ಈ ಮಧ್ಯೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ರ ನಿವಾಸದಲ್ಲಿ ತುರ್ತು ಸಭೆ ನಡೆಸಿ ಮೃತ ಮಸೂದ್ ಮತ್ತು ಫಾಝಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಿದೆ.
ಜಿಲ್ಲೆಯಲ್ಲಿ ನಡೆದ ಮೂರು ಅಮಾಯಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೇವಲ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ ನೀಡಿ 25 ಲಕ್ಷ ರೂ. ಪರಿಹಾರ ನೀಡಿರುವುದನ್ನು ಮತ್ತು ಉಳಿದ ಇಬ್ಬರು ಅಮಾಯಕ ಮುಸ್ಲಿಮರ ಮನೆಗೆ ಭೇಟಿ ನೀಡದೆ ಮುಖ್ಯಮಂತ್ರಿಯವರ ಅಮಾನವೀಯ ನಿಲುವಿಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮಸೂದ್ ಮತ್ತು ಫಾಝಿಲ್ನ ಕುಟುಂಬಸ್ಥರಿಗೆ ತಲಾ 30 ಲಕ್ಷ ರೂ. ಸಹಾಯ ಧನ ನೀಡಲು ತೀರ್ಮಾನಿಸಲಾಯಿತು. ಅಲ್ಲದೆ ಪ್ರಕರಣದ ಬಗ್ಗೆ ಕುಟುಂಬಸ್ಥರಿಗೆ ಕಾನೂನಿನ ನೆರವು ನೀಡಲು ನಿರ್ಣಯಿಸಲಾಯಿತು.
ಸಭೆಯಲ್ಲಿ ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಮಾಜಿ ಶಾಸಕ ಮೊಯ್ದಿನ್ ಬಾವಾ, ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಂ. ಮುಮ್ತಾಝ್ ಅಲಿ, ಕೆ. ಅಶ್ರಫ್, ಹನೀಫ್ ಹಾಜಿ ಬಂದರ್, ಸೈಯದ್ ಅಹ್ಮದ್ ಬಾಷಾ ತಂಙಳ್ ಮತ್ತಿತರರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.