ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಯ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ ವರೆಗೆ ಇದ್ದ ರಾತ್ರಿ ನಿರ್ಬಂಧವನ್ನು ಮತ್ತೆ ಎರಡು ದಿನ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಯಿಂದ ಸೋಮವಾರ ಬೆಳಿಗ್ಗೆ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ವರೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ನಿರ್ಬಂಧ ನಾಳೆ ಬೆಳಿಗ್ಗೆ ಮುಕ್ತಾಯವಾಗಬೇಕಿತ್ತು. ಆದರೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಮತ್ತು ಜಿಲ್ಲಾ ಪೊಲೀಸರ ವಿನಂತಿ ಮೇರೆಗೆ ಈ ನಿರ್ಬಂಧ ಮತ್ತೆ ಎರಡು ದಿನ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.