ಮಂಗಳೂರು (www.vknews.in) : ಕ್ಷುಲ್ಲಕ ಕಾರಣಕ್ಕಾಗಿ ಕೊಲೆಗೀಡಾದ ಮಸೂದ್ ಮತ್ತು ಫಾಝಿಲ್ ಕುಟುಂಬಕ್ಕೆ ತಲಾ ಮೂವತ್ತು ಲಕ್ಷ ರೂಪಾಯಿ ಪರಿಹಾರ ನೀಡುವ ಮೂಲಕ ಕರಾವಳಿ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದ ನಾಯಕತ್ವ ವಹಿಸಿರುವ ಮುಸ್ಲಿಂ ಸೆಂಟ್ರಲ್ ಕಮಿಟಿ ಪ್ರಶಂಸನೀಯ ಕಾರ್ಯವನ್ನು ಮಾಡಿದೆ ಎಂದು ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಗೌರವ ಡಾಕ್ಟರೇಟ್ ಪುರಸ್ಕೃತ ಹೆಚ್.ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಹೇಳಿದ್ದಾರೆ.
ಹಿಂದೂ ಸಮಾಜೋತ್ಸವಕ್ಕೆ ಬಂದವರಿಗೆ ಸಿಹಿ ಪಾನೀಯ ನೀಡಿ ಮಾನವೀಯತೆಯ ಸಂದೇಶವನ್ನು ಸಾರಿದ್ದ “ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ದ.ಕ.ಮತ್ತು ಉಡುಪಿ” ಸಂಘಟನೆ ನಾಡಿನ ಸೌಹಾರ್ದ ಪರಂಪರೆಯನ್ನು ಉಳಿಸಲು ಕಳೆದ ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಹಾಜಿ.ಕೆ.ಎಸ್ ಮುಹಮ್ಮದ್ ಮಸೂದ್ ನೇತೃತ್ವದ ಮುಸ್ಲಿಂ ಸೆಂಟ್ರಲ್ ಕಮಿಟಿ ಮುಸ್ಲಿಮರ ಎಲ್ಲಾ ಸಮಸ್ಯೆಗಳಿಗೆ ಧ್ವನಿಯಾಗಿ ಸಮಾಜದ್ರೋಹಿ ಸಂಘಟನೆಗಳ ಎಲ್ಲಾ ರೀತಿಯ ಕೋಮುವಾದಗಳನ್ನು ವಿರೋಧಿಸಿ ನಾಡಿನಲ್ಲಿ ನೆಮ್ಮದಿ ಮೂಡಿಸಲು ಯೋಜನೆಗಳನ್ನು ಹಮ್ಮಿಕೊಳ್ಳಬೇಕು.
ರಾಜ್ಯ ಸರಕಾರ ಜಾತಿ ನೋಡಿ ಸಹಾಯ ಮಾಡುವ ಮತ್ತು ಮೃತರ ಮನೆಗೆ ಭೇಟಿಯಾಗಿ ನೀಚ ರಾಜಕೀಯ ಆಟವಾಡುವಾಗ,ಅನ್ಯಾಯವಾಗಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್, ಪ್ರವೀಣ್ ಮತ್ತು ಫಾಝಿಲ್ ಮನೆಗೆ ಭೇಟಿ ಮುಸ್ಲಿಂ ಸೆಂಟ್ರಲ್ ಕಮಿಟಿ ನಾಯಕರು ಸಾಂತ್ವನ ಹೇಳುವ ಮೂಲಕ ಕೋಮು ಆಧಾರದಲ್ಲಿ ಜನರನ್ನು ವಿಭಜನೆ ಮಾಡುವವರಿಗೆ ತಕ್ಕ ತಿರುಗೇಟು ನೀಡಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.