ಹೈದರಾಬಾದ್ (ವಿಶ್ವ ಕನ್ನಡಿಗ ನ್ಯೂಸ್) : ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ಸಂಸ್ಥಾಪಕ ಎನ್.ಟಿ.ರಾಮರಾವ್ ಅವರ ಪುತ್ರಿ ಕೆ.ಉಮಾ ಮಹೇಶ್ವರಿ ಅವರು ತಮ್ಮ ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಹೈದರಾಬಾದಿನ ತನ್ನ ಮನೆಯಲ್ಲಿ ಮಲಗುವ ಕೋಣೆಯೊಳಗೆ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಉಮಾ ಮಹೇಶ್ವರಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಅತ್ತಿಗೆ. ಘಟನೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಉಮಾ ಮಹೇಶ್ವರಿ ಎನ್ಟಿಆರ್ ಅವರ ನಾಲ್ವರು ಪುತ್ರಿಯರಲ್ಲಿ ಕಿರಿಯವರು. ಆರೋಗ್ಯ ಸಮಸ್ಯೆಗಳಿಂದಾಗಿ ಅವರು ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ. ಖಿನ್ನತೆಯು ಆತ್ಮಹತ್ಯೆ ಮಾಡಿರಬಹುದು ಎಂಬುವುದು ಪೊಲೀಸರ ಆರಂಭಿಕ ತೀರ್ಮಾನವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.