ಜಬಲ್ಪುರ (ವಿಶ್ವ ಕನ್ನಡಿಗ ನ್ಯೂಸ್) : ಮಧ್ಯಪ್ರದೇಶದ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 10 ರೋಗಿಗಳು ಸಜೀವ ದಹನವಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಬಲ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಘಟಕಗಳು ಬೆಂಕಿಯನ್ನು ನಂದಿಸಲು ಶ್ರಮಿಸುತ್ತಿವೆ. ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಹೇಳಲಾಗುತ್ತಿದೆ ಮತ್ತು ಆಸ್ಪತ್ರೆಯಲ್ಲಿ ಸಿಲುಕಿದ್ದ ಎಲ್ಲರನ್ನೂ ರಕ್ಷಿಸಲಾಗಿದೆ ಎಂದು ಜಬಲ್ಪುರ ಸಿಎಸ್ಪಿ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.