ನಿಮಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ..
ದಾವಣಗೆರೆ (ವಿಶ್ವ ಕನ್ನಡಿಗ ನ್ಯೂಸ್) : ಸಬ್ಕಾ ಸಾಥ್, ಸಬ್ಕಾ ವಿಶ್ವಾಸ್ ಅನ್ನುವವರು ಪರಿಹಾರದಲ್ಲಿ ಯಾಕೆ ತಾರತಮ್ಯ ಮಾಡಿದ್ದೀರಿ, ದಕ್ಷಿಣ ಕನ್ನಡದಲ್ಲಿ ನಡೆದ ಮೂವರು ಯುವಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಾರತಮ್ಯ ಮಾಡಿರುವ ಕರ್ನಾಟಕ ಸರಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಮೃತಮಹೋತ್ಸವದ ಭಾಷಣದ ವೇಳೆ ಮಸೂದ್, ಪ್ರವೀಣ್, ಫಾಝಿಲ್ ಕೊಲೆ ಬಗ್ಗೆ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ, ಕೊಲೆಯಾದವರ ಕುಟುಂಬಕ್ಕೆ ಪರಿಹಾರ ನೀಡುವಾಗ ತಾರತಮ್ಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡದಲ್ಲಿ ಮಸೂದ್ ಕೊಲೆಯಾಗಿದೆ, ಪ್ರವೀಣ್ ಕೊಲೆಯಾಗಿದೆ ಫಾಝಿಲ್ ಕೊಲೆಯಾಗಿದೆ. ಸಿಎಂ ಅವರು ಮಸೂದ್ ಮನೆಗೆ ಹೋಗಲಿಲ್ಲ, ಫಾಝಿಲ್ ಮನೆಗೆ ಹೋಗಿಲ್ಲ. ಕೇವಲ ಪ್ರವೀಣ್ ಕುಟುಂಬಕ್ಕೆ ಮಾತ್ರ ಪರಿಹಾರ ಕೊಟ್ಟ ನೀವು ಮಸೂದ್ ಮತ್ತು ಫಾಝಿಲ್ ಕುಟುಂಬಕ್ಕೆ ಪರಿಹಾರ ಕೊಡಲಿಲ್ಲ. ನಿಮಗೆ ಸಬ್ಕಾ ಸಾಥ್ ಎಂದು ಹೇಳುವ ಯೋಗ್ಯತೆ ಇದೆಯಾ ಎಂದು ಅವರು ಪ್ರಶ್ನಿಸಿದರು.
ನಿಮಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಬೊಮ್ಮಾಯಿಯವರೇ, ನೀವು ಇಡೀ ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಒಂದು ಧರ್ಮಕ್ಕೆ ಸೇರಿದ ಮುಖ್ಯಮಂತ್ರಿಯೋ ಎಂದು ಪ್ರಶ್ನಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.