ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಗರದಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿಷೇಧಾಜ್ಞೆಯನ್ನು ಸಡಿಲಿಸುವಂತೆ ಎಡಿಜಿಪಿ ಅಲೋಕ್ ಕುಮಾರ್ ಸೂಚಿಸಿದ್ದಾರೆ.
ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆಯ ಬಳಿಕ ಅಹಿತಕರ ಘಟನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರ ಆಯುಕ್ತರು ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಈ ಮಧ್ಯೆ ಜಿಲ್ಲೆಯು ಸಹಜ ಸ್ಥಿತಿಗೆ ಮರಳುತ್ತಿರುವ ಕಾರಣ ನಾಳೆಯಿಂದ ನಿಷೇಧಾಜ್ಞೆಯನ್ನು ಸಡಿಲಗೊಳಿಸುವಂತೆ ಎಡಿಜಿಪಿ ಅಲೋಕ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಿಷೇಧಾಜ್ಞೆಯನ್ನು ಸಡಿಲಿಸಿದ ಬಳಿಕ ಒಂದು ವಾರದ ಕಾಲ ಬೈಕ್’ನಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ ಹೇರಲಾಗಿದೆ. ಅದೇ ವೇಳೆ ಮಕ್ಕಳು, ಹಿರಿಯರು ಬೈಕ್’ನಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಯುವಕರು ಹಿಂಬದಿ ಸವಾರರಾಗಿ ಸಂಚರಿಸದಂತೆ ಸೂಚಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.