ಕಾರ್ಕಳ (www.vknews.in) : MPM ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಗಸ್ಟ್ ೪ ರಂದು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ತುಳುವೆರೆ ‘ಆಟಿ’ ತುಳುನಾಡ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಘವೇಂದ್ರ ದಾಸರು ಕಾರ್ಯಕ್ರಮವನ್ನು ಉದ್ಘಾಟಿಸಿ ತುಳುನಾಡಿನಲ್ಲಿ ಆಟಿಯ ವಿಶೇಷತೆ, ಆಚರಣೆಯ ಮಹತ್ವ ಮತ್ತು ವಿದ್ಯಾರ್ಥಿಗಳಲ್ಲಿ ಕಡಿಮೆಯಾಗುತ್ತಿರುವ ಮೌಲ್ಯಗಳ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಡಾ.ಕಿರಣ್ ರವರು ತಮ್ಮ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಈ ಸಂದರ್ಭದಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಡಿನೇಟರ್ ಆದ ಜ್ಯೋತಿ ಹಿಂದಿನ ಕಾಲದ ಜನರ ಆಟಿಯ ಕಷ್ಟದ ಜೀವನ ಮತ್ತು ವಿದ್ಯಾರ್ಥಿಗಳ ಕಾರ್ಯಕ್ರಮದ ಆಯೋಜನೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸೇಕ್ರೆಟರಿಗಳಾದ ಧನುಷ್, ರಶ್ಮಿ, ರಕ್ಷಿತಾ ಉಪಸ್ಥಿತರಿದ್ದರು ದೀಕ್ಷಿತ್ ರವರು ನಿರೂಪಿಸಿದರು ಚಂದನ ಸ್ವಾಗತಿಸಿದರು ಶ್ರೇಯಾ ಹೆಗ್ಡೆ ವಂದಿಸಿದರು..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.