ಆಲುವಾ (ವಿಶ್ವ ಕನ್ನಡಿಗ ನ್ಯೂಸ್) : ಕೇರಳದ ಆಲುವಾ-ಕಾಲಡಿ ರಸ್ತೆಯ ಪುರಿಯಾರ್ ಛೇದಕದಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಅಪಘಾತದಿಂದ ಶಾಲಾ ವಾಹನ, ಖಾಸಗಿ ಬಸ್ ಸೇರಿದಂತೆ ಹಲವು ವಾಹನಗಳು ಸ್ವಲ್ಪದರಲ್ಲೇ ಪಾರಾಗಿವೆ. ಮರ ಬಿದ್ದಿರುವ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗುತ್ತಿದೆ.
ಅಪಾಯದಂಚಿನಲ್ಲಿರುವ ಮರವನ್ನು ಕಡಿಯುವಂತೆ ಸ್ಥಳೀಯರು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ನಿನ್ನೆ ಬೆಳಗಿನ ಜಾವ ಭಾರೀ ಮಳೆ ಹಾಗೂ ಗಾಳಿಗೆ ಮರ ಉರುಳಿ ಬಿದ್ದಿದೆ. ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ ವಿದ್ಯುತ್ ತಂತಿಗಳು ತುಂಡಾಗಿವೆ. ಸಂಚಾರ ನಿರ್ಬಂಧಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ನೇತೃತ್ವದಲ್ಲಿ ಮರ ತೆಗೆಯುವ ಕಾರ್ಯ ಆರಂಭವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.