ಬೆಂಗಳೂರು (Www.vknews.in) : ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ತಮ್ಮ ಕ್ಷೇತ್ರದ ಮಕ್ಕಳಿಗೆ ಶಿವಾಜಿನಗರ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಭಾನುವಾರ ಪ್ರತಿಭಾ ಪುರಸ್ಕಾರ ಮಾಡಿದರು.
ವಸಂತನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ 830ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಅವರನ್ನು ಪ್ರೋತ್ಸಾಹಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಿಜ್ವಾನ್ ಅರ್ಷದ್ ಅವರು, ಪ್ರತಿ ಮಗುವಿನ ಭವಿಷ್ಯವೂ ಮುಖ್ಯ. ಶ್ರಮ, ಆಸಕ್ತಿ ಮತ್ತು ಶ್ರದ್ಧೆಯು ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುತ್ತದೆ. ಇಂತಹ ಮಕ್ಕಳನ್ನು ಪ್ರೋತ್ಸಾಹಿಸಲು ನಾವು ಒಂದು ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ ಎಂದು ಶಾಸಕರು ಹೇಳಿದರು. ಅಷ್ಟೇ ಅಲ್ಲ, ಪೊಲೀಸ್ ಅಧಿಕಾರಿ ಭೀಮಾಶಂಕರ್ ಎಸ್.ಗುಳೇದ್ ಅವರು ಮಾತನಾಡಿ, ಶಿಕ್ಷಣವು ಸಮಾಜದ ಎಲ್ಲ ಸಮಸ್ಯೆಗಳಿಗೆ ಸೂಕ್ತ ಉತ್ತರವಾಗಿದೆ ಎಂದು ಹೇಳಿದರು.
ಕಲಿಯಲು ಅವಕಾಶ ಸಿಕ್ಕರೆ ಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು, ಮಕ್ಕಳಿಗೆ ಸೂಕ್ತ ವೇದಿಕೆ ಸಿಕ್ಕರೆ ಅವರು ಅದ್ಭುತವಾಗಿ ಸಾಧನೆ ಮಾಡುತ್ತಾರೆ ಎಂದು ಇನ್ವೆಂಚರ್ ಅಕಾಡೆಮಿಯ ಸಹ ಸಂಸ್ಥಾಪಕ ನೂರೇನ್ ಫಾಜಲ್ ಅವರು ತಿಳಿಸಿದರು. ಇನ್ನು, ಅಂತಹ ಮಕ್ಕಳಿಗೆ ಇಂಥ ಕಾರ್ಯಕ್ರಮಗಳ ಮೂಲಕ ವೇದಿಕೆ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ನೂರೇನ್ ಫಾಜಲ್ ಅವರು ತಿಳಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.