ಬೈಂದೂರು,(ವಿಶ್ವ ಕನ್ನಡಿಗ ನ್ಯೂಸ್ ): ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು 2ನೇ ತರಗತಿಯ ವಿಧ್ಯಾರ್ಥಿನಿ ನೀರುಪಾಲಾದ ಘಟನೆ ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ . ನೀರು ಪಾಲಾದ ಬಾಲಕಿಯನ್ನು ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಪುತ್ರಿ ಸನ್ನಿಧಿ ಎಂದು ಗುರುತಿಸಲಾಗಿದೆ.2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿ ಕಾಲು ಸಂಕದಾಟುವಾಗ ಆಯತಪ್ಪಿ ಬಿದ್ದಿದ್ದಾಳೆ. ನೀರು ರಭಸದಿಂದ ಹರಿಯುತ್ತಿದ್ದು, ನೀರಿನ ಸೆಳೆತಕ್ಕೆ ಬಾಲಕಿ ಕೊಚ್ಚಿಕೊಂಡು ಹೋಗಿದ್ದಾಳೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.