ಪಾಟ್ನಾ (ವಿಶ್ವ ಕನ್ನಡಿಗ ನ್ಯೂಸ್) : ಬಿಹಾರದ ಹೊಸ ಸರ್ಕಾರ ನಾಳೆ ಪ್ರಮಾಣ ವಚನ ಸ್ವೀಕರಿಸಲಿದೆ. ನಾಳೆ ಮಧ್ಯಾಹ್ನ 2 ಗಂಟೆಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ನಿತೀಶ್ ಕುಮಾರ್ ಮತ್ತು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು. ಮಹಾಮೈತ್ರಿಕೂಟಕ್ಕೆ ಏಳು ಪಕ್ಷಗಳು ಮತ್ತು 164 ಶಾಸಕರ ಬೆಂಬಲವಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಶಾಸಕರ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ಹಸ್ತಾಂತರಿಸಲಾಗಿದೆ.
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ರಯತ್ನಿಸಿದರೆ ಬಿಜೆಪಿಗೆ ಸೂಕ್ತ ಉತ್ತರ ನೀಡುವುದಾಗಿ ಆರ್ಜೆಡಿ ಸ್ಪಷ್ಟಪಡಿಸಿದೆ. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, “ಬಿಹಾರದಲ್ಲಿ ಇದು ಉತ್ತಮ ಆರಂಭವಾಗಿದೆ. ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧ ಧ್ವನಿ ಇರಬೇಕು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್, “ಬಿಹಾರದಲ್ಲಿ, ಪ್ರತಿಪಕ್ಷಗಳು ಬಿಜೆಪಿಗೆ ಸಂದೇಶವನ್ನು ನೀಡಿವೆ. ಬಿಜೆಪಿ ತನ್ನೊಂದಿಗೆ ಇರುವ ಪಕ್ಷಗಳನ್ನು ತೊಡೆದುಹಾಕಲು ಪ್ರಯತ್ನಿಸುತ್ತಿದೆ ಎಂದು ತೇಜಸ್ವಿ ಆರೋಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.