ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಪ್ರವಾದಿಯವರ ಧರ್ಮನಿಂದನೆಗೆ ಸಂಬಂಧಿಸಿದಂತೆ ದೇಶದ ವಿವಿಧ ಭಾಗಗಳಲ್ಲಿ ನೂಪುರ್ ಶರ್ಮ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸಲಿದ್ದಾರೆ. ಈ ವಿಷಯದಲ್ಲಿ ನೂಪುರ್ ವಿರುದ್ಧದ ಭವಿಷ್ಯದ ಪ್ರಕರಣಗಳಿಗೂ ಇದು ಅನ್ವಯಿಸುತ್ತದೆ. ತನ್ನ ಜೀವಕ್ಕೆ ಅಪಾಯವಿದೆ ಎಂಬ ನೂಪುರ್ ಶರ್ಮಾ ಅವರ ಹೇಳಿಕೆಯನ್ನು ನ್ಯಾಯಾಲಯ ಒಪ್ಪಿಕೊಂಡಿದೆ.
ಎಫ್ಐಆರ್ ಗಳನ್ನು ರದ್ದುಗೊಳಿಸುವಂತೆ ಕೋರಿ ದೆಹಲಿ ಹೈಕೋರ್ಟ್ ಗೆ ಹೋಗಲು ನೂಪುರ್ ಶರ್ಮಾಗೆ ಸ್ವಾತಂತ್ರ್ಯವಿದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆ.ಬಿ.ಪಾರ್ಡಿವಾಲಾ ಅವರ ಪೀಠವು ಈ ಆದೇಶವನ್ನು ನೀಡಿದೆ. ತನಿಖೆ ಪೂರ್ಣಗೊಳ್ಳುವವರೆಗೆ ನೂಪುರ್ ಶರ್ಮಾ ಅವರಿಗೆ ನೀಡಲಾಗಿರುವ ಮಧ್ಯಂತರ ಜಾಮೀನು ಮುಂದುವರಿಯುತ್ತದೆ ಎಂದು ನ್ಯಾಯಾಲಯ ಹೇಳಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.