ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಶಿಯಾಬ್, ರಿಯಾಜ್, ಬಷೀರ್ ಬಂಧಿತ ಆರೋಪಿಗಳಾಗಿದ್ದು, ಇವರು ಮೂವರು ಸ್ಥಳೀಯ ನಿವಾಸಿಗಳಾಗಿದ್ದಾರೆ. ಇದರೊಂದಿಗೆ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 7 ಕ್ಕೆ ಏರಿದೆ.
ಇಂದು ಮಧ್ಯಾಹ್ನ 12.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆಯವರು ಮಂಗಳೂರಿನಲ್ಲಿ ಪತ್ರಿಕಾ ಗೋಷ್ಟಿ ಕರೆದಿದ್ದು, ಅದರಲ್ಲಿ ಹತ್ಯೆ ಸಂಚಿನ ಸಂಪೂರ್ಣ ವಿವರ, ಹತ್ಯೆಯ ಹಿಂದಿನ ಕಾರಣ ಹಾಗೂ ಆರೋಪಿಗಳ ವಿವರ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಜು 26 ರಂದು ಸಂಜೆ ಬೆಳ್ಳಾರೆಯ ಮಾಸ್ತಿ ಕಟ್ಟೆ ಬಳಿ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪ್ರವೀಣ್ ಅವರನ್ನು ಕಡಿದು ಕೊಲೆ ಮಾಡಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.