ಮೆಹನಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ್ದ ಹೈಕೋರ್ಟ್..
ಕೋಝಿಕ್ಕೋಡ್ (ವಿಶ್ವ ಕನ್ನಡಿಗ ನ್ಯೂಸ್) : ಬ್ಲಾಗರ್ ರಿಫಾ ಮೆಹ್ನು ಅವರ ಸಾವಿಗೆ ಸಂಬಂಧಿಸಿದಂತೆ ಅವರ ಪತಿ ಮೆಹನಾಜ್ ಅವರನ್ನು ಬಂಧಿಸಲಾಗಿದೆ. ಮೆಹನಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಮೊನ್ನೆ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಕಕ್ಕೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ಕೋಯಿಕ್ಕೋಡ್ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮೆಹನಾಜ್ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪೋಕ್ಸೊ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ ಮೆಹನಾಜ್ ಈ ಹಿಂದೆ ಜೈಲಿನಲ್ಲಿದ್ದ. ಪೊಲೀಸರು ಅವನನ್ನು ಅಲ್ಲಿಂದ ವಶಕ್ಕೆ ತೆಗೆದುಕೊಂಡಿದ್ದಾರೆ. ಮುಂದೆ ವಿವರವಾದ ವಿಚಾರಣೆ ನಡೆಯಲಿದೆ ಎಂದು ವರದಿಯಾಗಿದೆ. ಕಕ್ಕೂರು ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಮಾನಸಿಕ ಮತ್ತು ದೈಹಿಕ ಚಿತ್ರಹಿಂಸೆಯು ರಿಫಾ ಸಾವಿಗೆ ಕಾರಣವಾಯಿತು ಎಂದು ಕಂಡುಬಂದಿದೆ.
ಮಹಿಳೆಯ ಮಾನಸಿಕ ಮತ್ತು ದೈಹಿಕ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಜಾಮೀನು ರಹಿತ ಸೆಕ್ಷನ್ಗಳ ಅಡಿಯಲ್ಲಿ ಮೆಹನಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.