ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ರಾಜ್ಯದಲ್ಲಿ ಇನ್ಮುಂದೆ ಮಾಸ್ಕ್ ಕಡ್ಡಾಯವಾಗಿ ಎಲ್ಲರೂ ಧರಿಸಬೇಕು ಎಂದಿದ್ದಾರೆ.
ಕೊರೋನಾ ಹೆಚ್ಚಳ ಕಾರಣದಿಂದಾಗಿ 60 ವರ್ಷ ಮೇಲ್ಪಟ್ಟವರು ತಪ್ಪದೇ ಶೀಘ್ರವೇ 3ನೇ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯಬೇಕು. ಇಂದಿನ ಸಭೆಯಲ್ಲಿ ಮಂಕಿಪಾಕ್ಸ್ ನಿಯಂತ್ರಣ ಕುರಿತಂತೆಯೂ ಚರ್ಚಿಸಲಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿಲ್ಲ. ಈ ಸೋಂಕಿನ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಳೆಗಾಲದಲ್ಲಿ ಹೆಚ್ಚಳವಾಗುತ್ತಿರುವಂತ ಮಲೇರಿಯಾ ನಿಯಂತ್ರಣಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.