ಕೋಲಾರ ( ವಿಶ್ವಕನ್ನಡಿಗ ನ್ಯೂಸ್ ) : ಸಾರ್ವಜನಿಕರು , ಸರ್ಕಾರ ನೀಡುವ ಆರೋಗ್ಯ ಸೇವೆಗಳನ್ನು ಪಡೆಯಲು ಆಭಾ ಕಾರ್ಡ್ನ್ನು ಹೊಂದಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ || ಜಗದೀಶ್ ಅವರು ತಿಳಿಸಿದರು.
ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ , ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ ಎಲ್ಲಾ ನಾಗರಿಕರಿಗೆ ಆಭಾ ಹೆಲ್ತ್ ಕಾರ್ಡ್ ಮಾಡಿಸುವ ಮತ್ತು ಆದರ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾರ್ವಜನಿಕರು ಆರೋಗ್ಯದ ಸೇವೆಗಳನ್ನು ಪಡೆಯಲು ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಎಬಿಹೆಚ್ ಕಾರ್ಡ್ನ್ನು ಬಳಸಿಕೊಳ್ಳಬಹುದು. ಈ ಆಭಾ ಕಾರ್ಡ್ನ್ನು ಆಧಾರ್ ಕಾರ್ಡ್ ಸಂಖ್ಯೆ ಮತ್ತು ಅದಕ್ಕೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ಬಳಸಿ ಪಡೆಯಬಹುದು ಎಂದು ತಿಳಿಸಿದರು. ಈ ಆಭಾ ಕಾರ್ಡ್ನ್ನು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ನೊಂದಿಗೆ ಜೋಡಿಸಲಾಗಿದೆ.
ಭಾರತದ ಎಲ್ಲಾ ನಾಗರಿಕರಿಗೆ ಲಭ್ಯವಾಗುವ ವಿಶಿಷ್ಟವಾದ 14 ಅಂಕೆಗಳ ಆರೋಗ್ಯ ಐ.ಡಿ ಕಾರ್ಡ್ ಇದಾಗಿದ್ದು ಆಭಾ ಕಾರ್ಡ್ಗಳನ್ನು ಪ್ರತಿಯೊಬ್ಬ ವ್ಯಕ್ತಿಯ ಜೀವನ ಪರ್ಯಂತ ಆರೋಗ್ಯ ದಾಖಲೆಗಳನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ.
ಜಿಲ್ಲೆಯಲ್ಲಿ ಇದುವರೆಗೂ 80 ಸಾವಿರ ಜನರು ಈ ಕಾರ್ಡ್ಗಾಗಿ ನೊಂದಾವಣೆ ಮಾಡಿಕೊಂಡು ಇದರ ಸೇವೆಯನ್ನು ಪಡೆಯುತ್ತಿದ್ದಾರೆ. ಅದರಂತೆಯೇ ಸಾರ್ವಜನಿಕರಿಗೆ ಇದರ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ತಿಳಿಸಿ ಅವರ ಮೂಲಕ ಅವರ ಕುಟುಂಬದ ಎಲ್ಲಾ ಸದಸ್ಯರು ಈ ಆಭಾ ಕಾರ್ಡ್ನ್ನು ಪಡೆಯುವುದು ಸುಲಭವಾಗುತ್ತದೆ.
ಇದನ್ನು ಪಡೆಯುವುದರಿಂದ ನಮ್ಮ ಎಲ್ಲಾ ಆರೋಗ್ಯದ ದಾಖಲೆಗಳು ಡಿಜಿಟಲ್ ಆಗುವುದು ಹಾಗೂ ಒಂದೇ ವೇದಿಕೆಯಡಿ ಲಭ್ಯವಾಗುವುದು ಎಂದು ಅವರು ತಿಳಿಸಿದರು.
ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿಗಳಾದ ಡಾ | ಎನ್.ಸಿ.ನಾರಾಯಣಸ್ವಾಮಿ ಅವರು ಮಾತನಾಡಿ , ಸಾರ್ವಜನಿಕರು ಒಂದು ಬಾರಿ ಆಭಾ ಕಾರ್ಡ್ನ್ನು ನೊಂದಾವಣಿ ಮಾಡಿಸಿದರೆ ನಿಮ್ಮ ಎಲ್ಲಾ ಆರೋಗ್ಯ ದಾಖಲೆಗಳನ್ನು ಯಾವುದೇ ಆರೋಗ್ಯ ಕೇಂದ್ರದಲ್ಲಿ ಪಡೆಯುವುದಕ್ಕೆ ಅವಕಾಶವಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ . ಚಂದನ್ ರವರು ನಾಗರಿಕರು ತಮ್ಮ ಸುಲಭವಾಗಿ ಆಭಾ ಕಾರ್ಡನ್ನು ಆಧಾರ್ ಕಾರ್ಡ್ ಮುಖಾಂತರ ತಾವೇ ಸ್ವಯಂ ಪ್ರೇರಿತರಾಗಿ ಪಡೆಯಬಹುದಾಗಿದೆ ಇದನ್ನು https://healthid.abdm.gov.in ಲಿಂಕ್ ನಿಂದ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಪಡೆದುಕೊಳ್ಳಬಹುದು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕಾರ್ಡ್ನ್ನು ಯಾವ ರೀತಿ ಪಡೆಯಬಹುದು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಇ – ಕಾರ್ಯಕ್ರಮ ಅಧಿಕಾರಿಗಳಾದ ವಿನಯ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.