ಉಡುಪಿ(ವಿಶ್ವಕನ್ನಡಿಗ ನ್ಯೂಸ್): ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಉಡುಪಿಯ ಸಂತ ಸಿಸಿಲಿ ಪದವಿಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.
ದೇಶದ ಸ್ವಾತಂತ್ರ್ಯದ ಅಮೃತೋತ್ಸವದ ಸಂಭ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ನಾಯಕ ಮತ್ತು ನಾಯಕಿಗೆ ರಾಷ್ಟ್ರ ಧ್ವಜ ಹಸ್ತಾಂತರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬಳಿಕ ಮಾತನಾಡಿದ ಭಾರತೀಯ ಜೀವ ವಿಮಾ ನಿಗಮ ಕಾಪು ಶಾಖೆಯ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಎನ್ ಕೆ, ವಿದ್ಯಾರ್ಥಿಗಳು ದೇಶದ ಬೆನ್ನೆಲುಬು. ದೇಶ ಅಭಿವೃದ್ಧಿ ಪಥಕ್ಕೆ ಸಾಗುವಂತಾಗಲು ನಾವೆಲ್ಲರೂ ಕೈಜೋಡಿಸಬೇಕು. ನಮ್ಮ ದೇಶದಲ್ಲಿ ರೈತರು ಮತ್ತು ಸೈನಿಕರಂತೆ ನಾವು ನಮ್ಮ ದೇಶಕ್ಕೆ ಸೇವೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮುಖ್ಯ ಅತಿಥಿ ಮಣಿಪಾಲ ಎಚ್ ಪಿ ಆರ್ ವಿದ್ಯಾಸಂಸ್ಥೆಯ ಪ್ರೊಫೆಸರ್ ಹರಿಪ್ರಸಾದ್ ರೈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯವನ್ನು ತಿಳಿಸಿದರು.
ಸಂಪನ್ಮೂಲ ಅತಿಥಿ ಜೆಸಿಐ ಇಂಡಿಯಾ ಇದರ ರಾಷ್ಟ್ರೀಯ ತರಬೇತುದಾರರಾದ ಜೆಸಿ ರಾಜೇಂದ್ರ ಭಟ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮೌಲ್ಯಗಳ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ವಲಯ ಎರಡರ ಅಧ್ಯಕ್ಷ ಲ. ಜೋನ್ ಫೆರ್ನಾಂಡಿಸ್ ಎಂಜೆಎಫ್, ಕಾಲೇಜಿನ ಪ್ರಾಂಶುಪಾಲೆ ಸಿ. ರಚನ, ಕಾರ್ಯಕ್ರಮದ ನಿರ್ದೇಶಕ ಲ. ವಿವೇಕ್ ಮೆಂಡೋನ್ಸಾ ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಅಧ್ಯಕ್ಷ ಲ. ಅನಿಲ್ ಲೋಬೊ ಸ್ವಾಗತಿಸಿದರೆ, ಕಾರ್ಯದರ್ಶಿ ಲ. ಸ್ಟೀವನ್ ಕುಲಾಸೊ ನಿರೂಪಿಸಿದರು. ಉಪನ್ಯಾಸಕಿ ವಸಂತಿ ಅಂಬಲ್ಪಾಡಿ ಧನ್ಯವಾದ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಲಯನ್ಸ್ ಸದಸ್ಯರಾದ ಲ. ಹೆನ್ರಿ ಡಿಸೋಜಾ, ಲ. ಗೋಡ್ ಫ್ರಿ ಡಿಸೋಜ, ಲ. ಜೆರಾಲ್ಡ್ ಪಿರೇರಾ, ಲ. ಲ. ರೊನಾಲ್ಡ್ ರೆಬೆಲ್ಲೋ, ಲ. ರೋಶನ್ ಕ್ರಾಸ್ತಾ, ಲ. ಅನಿಲ್ ಮಿನೇಜಸ್, ಲ. ಪ್ರೇಮ್ ಮಿನೇಜಸ್, ಲ. ಫ್ರಾಂಕಿ ಕರ್ಡೋಜಾ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.